Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:10 - ಕನ್ನಡ ಸತ್ಯವೇದವು C.L. Bible (BSI)

10 “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಸೌಲನು ಕೆಯೀಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆ ಎಂದು ನಿಮ್ಮ ದಾಸನಾದ ನನಗೆ ಸುದ್ದಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್‍ದೇವರಾದ ಯೆಹೋವನೇ, ಸೌಲನು ಕೆಯೀಲಕ್ಕೆ ಬಂದು ನನ್ನ ನಿವಿುತ್ತವಾಗಿ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು, “ಇಸ್ರೇಲರ ದೇವರಾದ ಯೆಹೋವನೇ, ಸೌಲನು ನನಗಾಗಿ ಕೆಯೀಲಾಕ್ಕೆ ಬರುತ್ತಾನೆಂಬುದೂ ಈ ಪಟ್ಟಣವನ್ನು ನಾಶಗೊಳಿಸುತ್ತಾನೆಂಬುದೂ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ದಾವೀದನು, “ಇಸ್ರಾಯೇಲ್ ದೇವರಾದ ಯೆಹೋವ ದೇವರೇ, ಸೌಲನು ಕೆಯೀಲಾ ನಗರಕ್ಕೆ ಬಂದು, ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿಮ್ಮ ಸೇವಕನು ಖಂಡಿತವಾಗಿ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:10
8 ತಿಳಿವುಗಳ ಹೋಲಿಕೆ  

ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಅವನು ಮೊರ್ದೆಕೈ ಒಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ, ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.


ಕೆಯೀಲಾದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯುವುದಕ್ಕಾಗಿ ಸೈನ್ಯವನ್ನು ಕೂಡಿಸಿದನು.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,


ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೇ? ಕೆಯೀಲಾ ಪುರಜನರು ನನ್ನನ್ನು ಅವನ ಕೈಗೆ ಒಪ್ಪಿಸುವರೇ? ಇಸ್ರಯೇಲ ದೇವರಾದ ಸರ್ವೇಶ್ವರಾ, ಈ ವಿಷಯದಲ್ಲಿ ಉತ್ತರ ದಯಪಾಲಿಸಿ,” ಎಂದು ಪ್ರಾರ್ಥಿಸಿದನು. ಸೌಲನು ಬರುವನೆಂಬುದಾಗಿ ಸರ್ವೇಶ್ವರನಿಂದ ಉತ್ತರ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು