Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ದಾವೀದನು ಮತ್ತು ಅವನ ಜನರು ಕೆಯೀಲಾವನ್ನು ಬಿಟ್ಟುಹೋದರು. ದಾವೀದನ ಜೊತೆಯಲ್ಲಿ ಸುಮಾರು ಆರುನೂರು ಜನರಿದ್ದರು. ದಾವೀದನು ಮತ್ತು ಅವನ ಜನರು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂಬುದು ಸೌಲನಿಗೆ ತಿಳಿಯಿತು. ಆದ್ದರಿಂದ ಸೌಲನು ಆ ನಗರಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:13
7 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.


ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.


ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.


ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.


ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು