Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:14 - ಕನ್ನಡ ಸತ್ಯವೇದವು C.L. Bible (BSI)

14 ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದು ಕಡೆಗೆ ಜೀಫ್ ಅರಣ್ಯದ ಪರ್ವತ ಪ್ರಾಂತಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ದಿನಂಪ್ರತಿಯೂ ಅವನನ್ನು ಹುಡುಕುತ್ತಿದ್ದರೂ ದೇವರು ಇವನ ಕೈಗೆ ಒಪ್ಪಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:14
19 ತಿಳಿವುಗಳ ಹೋಲಿಕೆ  

ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಜೀಪ್, ಟೆಲೆಮ್, ಬೆಯಾಲೋತ್,


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.


ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಮರುಭೂಮಿಯ ಹೋರೆಷದಲ್ಲಿ ಅಡಗಿಕೊಂಡಿದ್ದನು.


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ದೂರ, ಬಲುದೂರ ಹಾರಿ ಹೋಗುತ್ತಿದ್ದೆ I ನಿರ್ಜನ ಪ್ರದೇಶದಲಿ ವಾಸಿಸುತ್ತಿದ್ದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು