Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:15 - ಕನ್ನಡ ಸತ್ಯವೇದವು C.L. Bible (BSI)

15 ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಮರುಭೂಮಿಯ ಹೋರೆಷದಲ್ಲಿ ಅಡಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೌಲನು ತನ್ನನ್ನು ಕೊಲ್ಲ ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಸೌಲನು ತನ್ನನ್ನು ಕೊಲ್ಲಲು ಬರುತ್ತಾನೆಂದು ದಾವೀದನು ಹೆದರಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:15
7 ತಿಳಿವುಗಳ ಹೋಲಿಕೆ  

ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,


ಅದರ ಪೂರ್ವದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯ ಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವುದಕ್ಕಾಗಿ ಮರುಭೂಮಿಗೆ ಬಂದಿದ್ದಾನೆಂಬ ಸುದ್ದಿ ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಿತು.


ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ನಾಡಿನಲ್ಲಿಯೇ ಇಷ್ಟು ಆಪತ್ತುಗಳು ಇರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕಾಗಿ ಕೆಯೀಲಾಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಗಂಡಾಂತರಗಳು ಕಾದಿರಬಹುದಲ್ಲವೆ?” ಎಂದರು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.


ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು