Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:17 - ಕನ್ನಡ ಸತ್ಯವೇದವು C.L. Bible (BSI)

17 ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವದಿಲ್ಲ; ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ ಎಂದು ಹೇಳಿ ದೇವರಲ್ಲಿ ಅವನನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಹೆದರಬೇಡ, ನನ್ನ ತಂದೆಯಾದ ಸೌಲನು ನಿನಗೆ ತೊಂದರೆ ಮಾಡುವುದಿಲ್ಲ. ನೀನು ಇಸ್ರೇಲಿನ ರಾಜನಾಗುವೆ! ನಾನು ನಿನಗೆ ಎರಡನೆಯವನಾಗುತ್ತೇನೆ. ಇದು ನನ್ನ ತಂದೆಗೂ ಸಹ ತಿಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:17
24 ತಿಳಿವುಗಳ ಹೋಲಿಕೆ  

ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಾನು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ಮೊದಲು ನಿಮ್ಮನ್ನು ಕಾಣಬೇಕೆಂದಿದ್ದೇನೆ. ಸ್ವಲ್ಪಕಾಲ ನಿಮ್ಮೊಡನೆ ಸಂತೋಷವಾಗಿ ತಂಗಿದ್ದು ಬಳಿಕ ನಿಮ್ಮ ಸಹಾಯದಿಂದ ಆ ದೇಶಕ್ಕೆ ಪ್ರಯಾಣವನ್ನು ಮುಂದುವರಿಸುತ್ತೇನೆ.


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು.


ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.


ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ.


ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು