Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:25 - ಕನ್ನಡ ಸತ್ಯವೇದವು C.L. Bible (BSI)

25 ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ಸಮಾಚಾರ ದಾವೀದನಿಗೆ ಸಿಕ್ಕಿತು. ಅವನು ಮಾವೋನಿನಲ್ಲಿ ಇರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ್ ಮರುಭೂಮಿಗೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೌಲನು ಮತ್ತು ಅವನ ಜನರು ದಾವೀದನನ್ನು ಕಂಡುಹಿಡಿಯಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡುಹಿಡಿಯಲು ಆ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸೌಲನೂ, ಅವನ ಜನರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿದಾಗ, ಅವನು ಬಂಡೆಗಳಲ್ಲಿ ಇಳಿದು ಮಾವೋನಿನ ಮರುಭೂಮಿಯಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಮರುಭೂಮಿಯಲ್ಲಿ ದಾವೀದನನ್ನು ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:25
5 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು.


ಅವರ ತೊಡೆ ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿಬಿಟ್ಟನು. ಅನಂತರ ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು.


ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುತ್ತಿದ್ದರು. ಅಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವುದಕ್ಕಿದ್ದರು.


ಸರ್ವೇಶ್ವರನೇ ನನಗೆ ಪೊರೆಬಂಡೆ, ನನ್ನ ಕಲ್ಲು ಕೋಟೆ, ಆತನೇ ವಿಮೋಚಕ ನನಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು