1 ಸಮುಯೇಲ 23:3 - ಕನ್ನಡ ಸತ್ಯವೇದವು C.L. Bible (BSI)3 ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ನಾಡಿನಲ್ಲಿಯೇ ಇಷ್ಟು ಆಪತ್ತುಗಳು ಇರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕಾಗಿ ಕೆಯೀಲಾಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಗಂಡಾಂತರಗಳು ಕಾದಿರಬಹುದಲ್ಲವೆ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ದಾವೀದನ ಸೈನಿಕರು ಅವನಿಗೆ - ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವದಕ್ಕಾಗಿ ಕೆಯೀಲಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಭಯವುಂಟಾಗುವದಲ್ಲವೇ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ದಾವೀದನ ಜನರು ಅವನಿಗೆ, “ನೋಡು, ನಾವು ಯೆಹೂದದಲ್ಲಿದ್ದರೂ ಹೆದರಿರುವೆವು. ಫಿಲಿಷ್ಟಿಯರ ಸೈನ್ಯವೆಲ್ಲಿದೆಯೋ ಅಲ್ಲಿಗೆ ನಾವು ಹೋದರೆ, ಇನ್ನೆಷ್ಟು ಹೆದರುತ್ತೇವೆ ಎಂಬುದನ್ನು ಯೋಚಿಸು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ದಾವೀದನ ಜನರು ಅವನಿಗೆ, “ಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ. ಆದರೆ ನಾವು ಫಿಲಿಷ್ಟಿಯರ ಸೈನ್ಯಗಳಿಗೆ ವಿರೋಧವಾಗಿ ಕೆಯೀಲಾ ನಗರಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವುದು,” ಎಂದರು. ಅಧ್ಯಾಯವನ್ನು ನೋಡಿ |