1 ಸಮುಯೇಲ 23:4 - ಕನ್ನಡ ಸತ್ಯವೇದವು C.L. Bible (BSI)4 ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |