Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:10 - ಕನ್ನಡ ಸತ್ಯವೇದವು C.L. Bible (BSI)

10 ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದನೆಂಬದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು; ಆದರೆ ನಾನು ಅವರಿಗೆ - ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವದಿಲ್ಲ ಎಂದು ಹೇಳಿ ನಿನ್ನನ್ನು ಉಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:10
10 ತಿಳಿವುಗಳ ಹೋಲಿಕೆ  

“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II


ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ಸ್ವಾಮಿ ದೇವಾ, ನಾನೀಪರಿ ನಡೆದಿರೆ : ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು