Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:11 - ಕನ್ನಡ ಸತ್ಯವೇದವು C.L. Bible (BSI)

11 ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:11
22 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.


ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ನೇಮಕವಾದ ದಿನಗಳು ಮುಗಿಯುವ ಮೊದಲೇ ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಮಂದಿಯನ್ನು ಕೊಂದು, ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗಲು ಬೇಕಾಗಿದ್ದ ಲೆಕ್ಕಾಚಾರವನ್ನು ಪೂರ್ತಿ ಆಗಿ ಒಪ್ಪಿಸಿದನು. ಆಗ ಸೌಲನು ತನ್ನ ಮಗಳು ಮೀಕಲಳನ್ನು ದಾವೀದನಿಗೆ ಮದುವೆಮಾಡಿಕೊಟ್ಟನು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II


ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ


ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು