Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:15
12 ತಿಳಿವುಗಳ ಹೋಲಿಕೆ  

ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II


ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II


ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


ಅವನು ಕೂಡಲೆ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಖಚಿತಪಡಿಸಿಕೊಂಡನು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


“ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.


ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು