Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:16 - ಕನ್ನಡ ಸತ್ಯವೇದವು C.L. Bible (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:16
13 ತಿಳಿವುಗಳ ಹೋಲಿಕೆ  

ಸೌಲನು ದಾವೀದನ ಸ್ವರದ ಗುರುತು ಹಿಡಿದನು. “ದಾವೀದನೇ, ನನ್ನ ಪುತ್ರನೇ, ಇದು ನಿನ್ನ ಸ್ವರವೇ?” ಎಂದು ಕೇಳಿದನು. ಅವನು, “ಅರಸನೇ, ನನ್ನ ಒಡೆಯನೇ, ಹೌದು, ನನ್ನ ಸ್ವರವೇ;


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.


ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.


ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು