Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅವನು ಎಲ್ಲಾ ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು ಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವದಕ್ಕೋಸ್ಕರ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:2
9 ತಿಳಿವುಗಳ ಹೋಲಿಕೆ  

ಆಗ ಸೌಲನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕಾಗಿ ಜೀಫ್ ಮರುಭೂಮಿಗೆ ಹೋದನು.


ದುರುಳರ ಒಡೆಯರು ಶಿಖರದಿಂದ ಬಿದ್ದಾಗ ಕೆಳಕೆ I ನನ್ನ ಮಾತು ಯಥಾರ್ಥವೆಂದು ಜನ ಕಿವಿಗೊಡುವರೆನಗೆ II


ಬೆಟ್ಟಗುಡ್ಡಗಳಿವೆ ಕಾಡುಕುರಿಗಳಿಗೆ I ಬಂಡೆಬಿರುಕುಗಳಿವೆ ಬೆಟ್ಟದ ಮೊಲಗಳಿಗೆ II


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಸರ್ವೇಶ್ವರನೇ ನನಗೆ ಪೊರೆಬಂಡೆ, ನನ್ನ ಕಲ್ಲು ಕೋಟೆ, ಆತನೇ ವಿಮೋಚಕ ನನಗೆ


“ಕಾಡುಮೇಕೆ ಈಯುವ ವೇಳೆಯನು ತಿಳಿದಿರುವೆಯಾ? ಹುಲ್ಲೆಗಳ ಹೆರಿಗೆಯನು ಗ್ರಹಿಸಿರುವೆಯಾ?


ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು