Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಮಾತುಗಳಿಂದ ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ. ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:7
10 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಸ್ವಹಸ್ತದಿಂದ ಸೇಡುತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಜಾಣ್ಮೆಯೂ ಸ್ತುತ್ಯರ್ಹವೇ ಸರಿ.


ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.


ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು