Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:8 - ಕನ್ನಡ ಸತ್ಯವೇದವು C.L. Bible (BSI)

8 ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾವೀದನೂ ಹೊರಗೆ ಬಂದು - ಅರಸನೇ, ನನ್ನ ಒಡೆಯನೇ ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:8
11 ತಿಳಿವುಗಳ ಹೋಲಿಕೆ  

ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಸೌಲನು ದಾವೀದನ ಸ್ವರದ ಗುರುತು ಹಿಡಿದನು. “ದಾವೀದನೇ, ನನ್ನ ಪುತ್ರನೇ, ಇದು ನಿನ್ನ ಸ್ವರವೇ?” ಎಂದು ಕೇಳಿದನು. ಅವನು, “ಅರಸನೇ, ನನ್ನ ಒಡೆಯನೇ, ಹೌದು, ನನ್ನ ಸ್ವರವೇ;


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.


ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು