Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:9 - ಕನ್ನಡ ಸತ್ಯವೇದವು C.L. Bible (BSI)

9 “ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೌಲನಿಗೆ ದಾವೀದನು, “ಇಗೋ, ದಾವೀದನು ನಿನಗೆ ಕೇಡು ಮಾಡಲು ಹುಡುಕುತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಏಕೆ ಕೇಳುತ್ತಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:9
19 ತಿಳಿವುಗಳ ಹೋಲಿಕೆ  

ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಅಡಿಹೊಟ್ಟೆಗೆ ಇಳಿಯುವ ಕವಳಗಳು.


ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.


ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.


ದುರುಳರ ಒಡೆಯರು ಶಿಖರದಿಂದ ಬಿದ್ದಾಗ ಕೆಳಕೆ I ನನ್ನ ಮಾತು ಯಥಾರ್ಥವೆಂದು ಜನ ಕಿವಿಗೊಡುವರೆನಗೆ II


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.


ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,


ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು