Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:13
17 ತಿಳಿವುಗಳ ಹೋಲಿಕೆ  

ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.


ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.


ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.


ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.


ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.


ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.


ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು.


ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.


ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.


“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು