Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:2 - ಕನ್ನಡ ಸತ್ಯವೇದವು C.L. Bible (BSI)

2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:2
17 ತಿಳಿವುಗಳ ಹೋಲಿಕೆ  

ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು.


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೊರಟಿದ್ದಾರೆಂಬ ಸಮಾಚಾರ ತಾಮಾರಳಿಗೆ ಮುಟ್ಟಿತು.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.


ದಾವೀದನ ಇಬ್ಬರು ಹೆಂಡತಿಯರಾದ ಜೆಸ್ರೀಲಿನವಳಾದ ಅಹೀನೋವಮಳು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಕೂಡ ಸೆರೆಯಾಗಿ ಹೋಗಿದ್ದರು.


ಅವನು ದಿನದಿಂದ ದಿನಕ್ಕೆ ಹೆಚ್ಚು ಆಸ್ತಿವಂತನಾಗಿ ದೊಡ್ಡ ಧನವಂತನಾದನು.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


ಅವು ಯಾವುವೆಂದರೆ: ಅರಸನಾದ ಆಳು, ಹೊಟ್ಟೆ ತುಂಬಿಸಿಕೊಂಡು ಸುತ್ತಾಡುವ ನೀಚ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು