Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:22 - ಕನ್ನಡ ಸತ್ಯವೇದವು C.L. Bible (BSI)

22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:22
9 ತಿಳಿವುಗಳ ಹೋಲಿಕೆ  

ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.


ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.


ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.


ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ, ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ತೆಗೆದುಹಾಕುವೆನು.


ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.


ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು.


ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು