Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:26 - ಕನ್ನಡ ಸತ್ಯವೇದವು C.L. Bible (BSI)

26 ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:26
20 ತಿಳಿವುಗಳ ಹೋಲಿಕೆ  

ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ಪಾತ್ರೆಗಳು ತುಂಬಿದಾಗ, ಆಕೆ ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು,” ಅನ್ನಲು ಅವನು, “ಪಾತ್ರೆಗಳು ತೀರಿಹೋದುವು,” ಎಂದು ಉತ್ತರಕೊಟ್ಟನು. ಕೂಡಲೆ ಎಣ್ಣೆ ಉಕ್ಕುವುದೂ ನಿಂತುಹೋಯಿತು.


ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.


ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.


ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.


ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು