Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:29 - ಕನ್ನಡ ಸತ್ಯವೇದವು C.L. Bible (BSI)

29 ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ನನ್ನ ಸ್ವಾವಿುಯಾದ ನಿನ್ನನ್ನು ಹಿಂಸಿಸಿ ಜೀವತಗೆಯಬೇಕೆಂದಿರುವಾಗ ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಭದ್ರವಾಗಿರಲಿ; ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:29
17 ತಿಳಿವುಗಳ ಹೋಲಿಕೆ  

ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”


ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.


ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II


ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು