Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:3 - ಕನ್ನಡ ಸತ್ಯವೇದವು C.L. Bible (BSI)

3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:3
15 ತಿಳಿವುಗಳ ಹೋಲಿಕೆ  

ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.


ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆ ಎಂಬ ಸಮಾಚಾರ ಅಲ್ಲಿನ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.


ಈಜಿಪ್ಟನ್ನು ಪ್ರವೇಶಿಸುವುದಕ್ಕೆ ಮುಂಚೆಯೆ ತನ್ನ ಹೆಂಡತಿ ಸಾರಯಳಿಗೆ, “ನೀನು ಬಲು ಚೆಲುವಾದ ಹೆಣ್ಣು;


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.


ಅವು ಯಾವುವೆಂದರೆ: ಅರಸನಾದ ಆಳು, ಹೊಟ್ಟೆ ತುಂಬಿಸಿಕೊಂಡು ಸುತ್ತಾಡುವ ನೀಚ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು