Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:32 - ಕನ್ನಡ ಸತ್ಯವೇದವು C.L. Bible (BSI)

32 ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ದಾವೀದನು ಅಬೀಗೈಲಳಿಗೆ - ಈಹೊತ್ತು ನನ್ನನ್ನು ಎದುರುಗೊಳ್ಳುವದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಗ ದಾವೀದನು ಅಬೀಗೈಲಳಿಗೆ, “ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ದೇವರೇ ನಿನ್ನನ್ನು ನನ್ನ ಬಳಿಗೆ ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:32
12 ತಿಳಿವುಗಳ ಹೋಲಿಕೆ  

ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


“ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು