Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:33 - ಕನ್ನಡ ಸತ್ಯವೇದವು C.L. Bible (BSI)

33 ಸ್ವಹಸ್ತದಿಂದ ಸೇಡುತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಜಾಣ್ಮೆಯೂ ಸ್ತುತ್ಯರ್ಹವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಬುದ್ಧಿಯೂ ಸ್ತೋತ್ರಾರ್ಹವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಿನ್ನ ಒಳ್ಳೆಯ ತೀರ್ಪಿಗಾಗಿ ದೇವರು ನಿನ್ನನ್ನು ಆಶೀರ್ವದಿಸಲಿ. ಈ ದಿನ ನಾನು ನಿರ್ದೋಷಿಗಳನ್ನು ಕೊಲ್ಲದಂತೆ ನೀನು ನನ್ನನ್ನು ತಡೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:33
12 ತಿಳಿವುಗಳ ಹೋಲಿಕೆ  

ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.


ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು