Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:41 - ಕನ್ನಡ ಸತ್ಯವೇದವು C.L. Bible (BSI)

41 ಆಕೆ ಎದ್ದು ನಮಸ್ಕಾರ ಮಾಡಿ, ಮಾತಾಡಿಸಿದವನಿಗೆ, “ನಿನ್ನ ದಾಸಿಯಾದ ನಾನು ನನ್ನ ಒಡೆಯರ ಕೈಕೆಳಗಿರುವ ಸೇವಕರ ಪಾದ ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಕೆ ಎದ್ದು ನಮಸ್ಕಾರಮಾಡಿ ಮಾತಾಡಿಸಿದವನಿಗೆ - ನಿನ್ನ ದಾಸಿಯಾದ ನಾನು ನನ್ನ ಸ್ವಾವಿುಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವದಕ್ಕೆ ಸಿದ್ಧಳಾಗಿದ್ದೇನೆ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅಬೀಗೈಲಳು ಸಾಷ್ಟಾಂಗನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:41
10 ತಿಳಿವುಗಳ ಹೋಲಿಕೆ  

ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.


ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.


ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.


ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ.


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.


ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದ ಅವರು ನಿನ್ನನ್ನು ತಮಗೆ ಹೆಂಡತಿಯಾಗುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು