Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:10 - ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:10
23 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II


ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲ ಆಳುಗಳೂ ಅದೇ ದಿವಸ ಸತ್ತರು.


ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.


ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.


“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.


ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು