Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:12 - ಕನ್ನಡ ಸತ್ಯವೇದವು C.L. Bible (BSI)

12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೌಲನ ತಲೆಗಿಂಬಿನ ಬಳಿಯಲ್ಲಿದ್ದ ಬರ್ಜಿ ತಂಬಿಗೆಗಳನ್ನು ತೆಗೆದುಕೊಂಡು ಹೋದನು. ಯಾರೂ ಕಾಣಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ; ಯಾರೂ ಎಚ್ಚರವಾಗಲಿಲ್ಲ. ಯಾಕಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:12
7 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.


ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,


ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.


ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು