1 ಸಮುಯೇಲ 26:16 - ಕನ್ನಡ ಸತ್ಯವೇದವು C.L. Bible (BSI)16 ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಹೀಗೆ ಮಾಡುವದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು. ಅಧ್ಯಾಯವನ್ನು ನೋಡಿ |