1 ಸಮುಯೇಲ 26:19 - ಕನ್ನಡ ಸತ್ಯವೇದವು C.L. Bible (BSI)19 ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿ |