1 ಸಮುಯೇಲ 26:20 - ಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯ ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲ್ಯರ ಅರಸನು ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನ ಸನ್ನಿಧಿಯಿಂದ ದೂರದಲ್ಲಿರುವ ಈ ಸ್ಥಳದಲ್ಲಿ ನನ್ನನ್ನು ಸಾಯಿಸಬೇಡಿ. ಇಸ್ರೇಲರ ರಾಜನು ಒಂದು ಸಣ್ಣ ಹುಳಕ್ಕಾಗಿ ಹುಡುಕುತ್ತಾ ಹೊರ ಬಂದಿದ್ದಾನೆ. ಕೌಜುಗ ಹಕ್ಕಿಯನ್ನು ಬೆಟ್ಟಗಳಲ್ಲಿ ಬೇಟೆಯಾಡುವ ಬೇಟೆಗಾರನಂತೆ ನೀನಿರುವೆಯಲ್ಲಾ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು. ಅಧ್ಯಾಯವನ್ನು ನೋಡಿ |