1 ಸಮುಯೇಲ 26:23 - ಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು. ಅಧ್ಯಾಯವನ್ನು ನೋಡಿ |