Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:25 - ಕನ್ನಡ ಸತ್ಯವೇದವು C.L. Bible (BSI)

25 ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟುಹೋದನು. ಸೌಲನು ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:25
10 ತಿಳಿವುಗಳ ಹೋಲಿಕೆ  

ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಮರಳಿದನು.


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು