Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:9
11 ತಿಳಿವುಗಳ ಹೋಲಿಕೆ  

ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ


“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.


ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು