1 ಸಮುಯೇಲ 27:1 - ಕನ್ನಡ ಸತ್ಯವೇದವು C.L. Bible (BSI)1 ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.
ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!