Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:11 - ಕನ್ನಡ ಸತ್ಯವೇದವು C.L. Bible (BSI)

11 ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಒಬ್ಬ ಗಂಡಸನ್ನಾಗಲಿ ಹೆಂಗಸನ್ನಾಗಲಿ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು. ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:11
7 ತಿಳಿವುಗಳ ಹೋಲಿಕೆ  

ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!


ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿ ಇದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ.


ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು