Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:6 - ಕನ್ನಡ ಸತ್ಯವೇದವು C.L. Bible (BSI)

6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದದರಿಂದ ಚಿಕ್ಲಗ್ ಎಂಬದು ಇಂದಿನವರೆಗೂ ಯೆಹೂದರಾಜರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:6
12 ತಿಳಿವುಗಳ ಹೋಲಿಕೆ  

ಚಿಕ್ಲಗ್ ಊರೂ ಮೆಕೋನವೂ ಅದರ ಗ್ರಾಮಗಳೂ;


ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ


ಹೀಗೆ ಅವನು ಹಿಂದಿರುಗುತ್ತಿದ್ದಾಗ ಅವನನ್ನು ಸೇರಿಕೊಂಡ ಮನಸ್ಸೆಗೋತ್ರದ ಸೈನಿಕರ ಹೆಸರುಗಳು ಇಂತಿವೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಹಾಗೂ ಚಿಲ್ಲೆತೈ. ಇವರೆಲ್ಲರೂ ಮನಸ್ಸೆ ಗೋತ್ರದಲ್ಲಿ ಸಹಸ್ರಾಧಿಪತಿಗಳಾಗಿದ್ದರು.


ದಾವೀದನು ಅರಸ ಸೌಲನಿಂದ ತಪ್ಪಿಸಿಕೊಂಡು ಚಿಕ್ಲಗ್ ಎಂಬಲ್ಲಿಗೆ ಹೋಗಿ ವಾಸಿಸಿದ್ದನು. ಅಲ್ಲಿ ಬೆನ್ಯಾಮೀನ್ ಗೋತ್ರದ ಅನೇಕ ಅನುಭವಶಾಲಿಗಳೂ ನಂಬಿಗಸ್ಥರೂ ಆದ ಸೈನಿಕರು ಬಂದು ಅವನನ್ನು ಸೇರಿಕೊಂಡರು.


ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು.


ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ಹೊರ್ಮಾ, ಚಿಕ್ಲಗ್, ಬೇತ್ ಮಾರ್ಕಾಬೋತ್,


ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.


ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು