Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:12 - ಕನ್ನಡ ಸತ್ಯವೇದವು C.L. Bible (BSI)

12 ಆ ಸ್ತ್ರೀ ಸಮುವೇಲನನ್ನು ಕಂಡಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೇ?,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಸ್ತ್ರೀಯು ಸಮುವೇಲನನ್ನು ಕಂಡ ಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೋ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:12
5 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ಅವನಿಗೆ, ಯಾರೊಬ್ಬಾಮನ ಹೆಂಡತಿ ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವುದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆ; ಆಕೆಗೆ ಇಂಥಿಂಥ ಉತ್ತರಕೊಡು, ಎಂದು ತಿಳಿಸಿದ್ದರು.


ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.


ಆ ಹೆಣ್ಣು ಲೇಯಳೆಂದು ಯಕೋಬನಿಗೆ ಬೆಳಿಗ್ಗೆ ತಿಳಿಯಿತು. ಅವನು ಲಾಬಾನನಿಗೆ, “ನೀವು ನನಗೇಕೆ ಹೀಗೆ ಮಾಡಿದಿರಿ? ರಾಖೇಲಳಿಗಾಗಿ ಅಲ್ಲವೆ ನಾನು ನಿಮಗೆ ಸೇವೆಮಾಡಿದ್ದು? ನನಗೆ ಮೋಸಮಾಡಿದ್ದೇಕೆ?” ಎಂದು ಕೇಳಿದನು.


ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.


ಆಗ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಿದನು. “ಭೂಮಿಯೊಳಗಿಂದ ಪ್ರೇತಾತ್ಮವೊಂದು ಬರುತ್ತಿರುವುದನ್ನು ನೋಡುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು