1 ಸಮುಯೇಲ 28:14 - ಕನ್ನಡ ಸತ್ಯವೇದವು C.L. Bible (BSI)14 ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ತಿರಿಗಿ - ಅವನ ರೂಪ ಹೇಗಿದೆ ಎಂದು ಕೇಳಲು ಆಕೆಯು - ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕನು ಬರುತ್ತಾನೆ ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು, “ಅವನ ರೂಪ ಹೇಗಿದೆ?” ಎಂದು ಅವಳನ್ನು ಕೇಳಿದನು. ಅವಳು, “ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನುಷ್ಯನು ಬರುತ್ತಿದ್ದಾನೆ,” ಎಂದಳು. ಅವನು ಸಮುಯೇಲನು ಎಂದು ಸೌಲನು ತಿಳಿದುಕೊಂಡು, ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |