Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಸಮುವೇಲನು ಸೌಲನನ್ನು - ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದಿ ಎಂದು ಕೇಳಿದನು. ಅದಕ್ಕೆ ಸೌಲನು - ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಬಿಟ್ಟು ದೂರಹೋಗಿದ್ದಾನೆ; ಆತನು ನನಗೆ ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:15
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.


ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.


ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು