Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸಮುವೇಲನು - ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:16
10 ತಿಳಿವುಗಳ ಹೋಲಿಕೆ  

ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ,


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.


ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು