1 ಸಮುಯೇಲ 28:2 - ಕನ್ನಡ ಸತ್ಯವೇದವು C.L. Bible (BSI)2 ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೌದು, ನಿನ್ನ ದಾಸನ ಸಾಹಸವು ಗೊತ್ತಾಗುವದು ಅಂದನು. ಆಕೀಷನು ಅವನಿಗೆ - ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇವಿುಸಿಕೊಳ್ಳುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ಆಕೀಷನಿಗೆ, “ನಿಶ್ಚಯವಾಗಿ ನಿನ್ನ ದಾಸನು ಮಾಡುವುದನ್ನು ನೀನೇ ತಿಳಿದುಕೊಳ್ಳುವಿ,” ಎಂದನು. ಆಕೀಷನು ದಾವೀದನಿಗೆ, “ಎಂದೆಂದಿಗೂ ನಾನು ನಿನ್ನನ್ನು ಕಾವಲುಗಾರನಾಗಿ ಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |