1 ಸಮುಯೇಲ 28:6 - ಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.