1 ಸಮುಯೇಲ 29:3 - ಕನ್ನಡ ಸತ್ಯವೇದವು C.L. Bible (BSI)3 ಆಗ ಫಿಲಿಷ್ಟಿಯ ರಾಜರು, “ಈ ಹಿಬ್ರಿಯರು ಏಕೆ?” ಎಂದು ಆಕೀಷನನ್ನು ಕೇಳಿದರು. “ಈತ, ಇಸ್ರಯೇಲರ ಅರಸನಾದ ಸೌಲನ ಸೇವಕನಾದ ದಾವೀದನಲ್ಲವೇ? ಇವನು ಇಷ್ಟು ವರ್ಷ, ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲೇ ಇದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ,” ಎಂದು ಆಕೀಷನು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.