1 ಸಮುಯೇಲ 29:4 - ಕನ್ನಡ ಸತ್ಯವೇದವು C.L. Bible (BSI)4 ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು, :ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಫಿಲಿಷ್ಟಿಯಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ - ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇವಿುಸಿದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡಿಯುವದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ? ಅಧ್ಯಾಯವನ್ನು ನೋಡಿ |
ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.