Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:8 - ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ ಅವನ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:8
10 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.


ದಾವೀದನು, “ನಾನೇನು ತಪ್ಪು ಮಾಡಿದೆ? ಪ್ರಶ್ನೆಯೊಂದನ್ನು ಕೇಳಬಾರದಿತ್ತೆ?” ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋದನು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.


ಆದರೆ ರಾಜರುಗಳು ನಿನ್ನನ್ನು ಮೆಚ್ಚುವುದಿಲ್ಲ; ಆದುದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು; ಅವರನ್ನು ಸಿಟ್ಟುಗೊಳಿಸಬಾರದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು