Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:14 - ಕನ್ನಡ ಸತ್ಯವೇದವು C.L. Bible (BSI)

14 ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ನೈವೇದ್ಯಗಳಿಂದಲೂ ಎಂದಿಗೂ ಪ್ರಾಯಶ್ಚಿತ್ತವಾಗುವದಿಲ್ಲವೆಂಬದಾಗಿ ಆಣೆಯಿಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:14
10 ತಿಳಿವುಗಳ ಹೋಲಿಕೆ  

ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.


ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.


ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II


“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು