1 ಸಮುಯೇಲ 3:17 - ಕನ್ನಡ ಸತ್ಯವೇದವು C.L. Bible (BSI)17 ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಏಲಿಯು ಅವನಿಗೆ - ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಬೇಡ; ಮುಚ್ಚಿದರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು. ಅಧ್ಯಾಯವನ್ನು ನೋಡಿ |
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!