Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:2 - ಕನ್ನಡ ಸತ್ಯವೇದವು C.L. Bible (BSI)

2 ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು ಕುರುಡನಂಥಾಗಿಬಿಟ್ಟಿದ್ದನು. ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. ನೋಡುವುದಕ್ಕಾಗದಂತೆ ಅವನ ಕಣ್ಣುಗಳು ಮಬ್ಬಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:2
8 ತಿಳಿವುಗಳ ಹೋಲಿಕೆ  

ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, "ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.


ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ.


ಆಕೆ ಅವನು ಹೇಳಿದಂತೆಯೇ ಮಾಡಿ ಶಿಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ನೋಡಲಾಗುತ್ತಿರಲಿಲ್ಲ; ಮುಪ್ಪಿನಿಂದ ಅವನ ಕಣ್ಣು ಮೊಬ್ಬಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು