Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇವಿುಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲ್ಯರಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಮುವೇಲನು ಯೆಹೋವನ ನಿಜಪ್ರವಾದಿಯೆಂಬುದು ದಾನಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರೇಲರಿಗೂ ಆಗ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:20
10 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


“ಪ್ರವಾದಿ ಹೇಳಿದ ಮಾತು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ ಎಂದುಕೊಳ್ಳುತ್ತೀರೋ?


ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”


ನಿಮ್ಮ ಪುತ್ರರಲ್ಲಿ ಕೆಲವರನ್ನು ಪ್ರವಾದಿಗಳನ್ನಾಗಿ, ನಿಮ್ಮ ಯುವಜನರಲ್ಲಿ ಕೆಲವರನ್ನು ನಾಜೀರರನ್ನಾಗಿ ಸಿದ್ಧಪಡಿಸಿದವನು ನಾನೇ. ಇಸ್ರಯೇಲಿನ ಜನರೇ, ಇದು ನಿಜವಲ್ಲವೇ? ನೀವೇ ಹೇಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು