Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:21 - ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ತಿರುಗಿ ಶೀಲೋವಿನಲ್ಲಿ ಕಾಣಿಸಿಕೊಂಡರು. ಏಕೆಂದರೆ ಶೀಲೋವಿನಲ್ಲಿ ಯೆಹೋವ ದೇವರು ವಾಕ್ಯದ ಮೂಲಕ ಸಮುಯೇಲನಿಗೆ ಪ್ರಕಟಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:21
12 ತಿಳಿವುಗಳ ಹೋಲಿಕೆ  

ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.


ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.


“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,


ಸೌಲನು ಬರುವುದಕ್ಕೆ ಒಂದು ದಿವಸ ಮುಂದಾಗಿಯೇ ಸರ್ವೇಶ್ವರ ಸಮುವೇಲನಿಗೆ,


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು